top of page
  • Writer's pictureDoubleClickMedia

ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ: ಯಾರಿಗೆಲ್ಲಾ ಅನ್ವಯ?


traffic police

ರಾಜ್ಯ ಹೈಕೋಟ್೯ನ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ 2023ರ ಫೆ.11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50 ರಷ್ಟ ಮಾತ್ರ ರಿಯಾಯಿತಿ ನೀಡಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.


ಈ ರಿಯಾಯಿತಿಯು 2023ರ ಸೆಪ್ಟೆಂಬರ್ 9 ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಈ ಅವಕಾಶದ ಪ್ರಯೋಜನ ಪಡೆದು ಇ- ಸಂಚಾರಿ ಚಲನ್ ಪಡೆದು ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸಂಚಾರರು ತಮ್ಮ ಪ್ರಕರಣ ಮುಕ್ತಾಯಗೊಳಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Comentários


bottom of page