DoubleClickMedia
ತೀರ್ಥಹಳ್ಳಿ : ಯುವತಿಯರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ, ಎಬಿವಿಪಿ ಮುಖಂಡನ ಬಂಧನ

ತೀರ್ಥಹಳ್ಳಿ, ಜೂನ್ 18, 2023: ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ತೀರ್ಥಹಳ್ಳಿ ಘಟಕದ ಅಧ್ಯಕ್ಷ ಪ್ರತೀಕ್ ಗೌಡ ಎಂಬಾತನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗಳು ಹರಿದಾಡುತ್ತಿರುವ ಬಗ್ಗೆ NSUI ಮುಖಂಡರು ಶಿವಮೊಗ್ಗ ಉಪ ಪೊಲೀಸ್ ವರಿಷ್ಠಾಧಿಕಾರಿಗಳ ಗಮನ ಸೆಳೆದಿದ್ದರು. ಎಬಿವಿಪಿ ತೀರ್ಥಹಳ್ಳಿ ಘಟಕದ ಸದಸ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದರು
ಆರೋಪಿಯು ವಿದ್ಯಾರ್ಥಿ ಸಂಘಟನೆಗೆ ಸೇರುವ ಬಾಲಕಿಯರನ್ನು ಪ್ರಲೋಭಿಸಿ ಅವರ ಒಪ್ಪಿಗೆಯಿಲ್ಲದೆ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವುದಾಗಿ ಆರೋಪಿಸಲಾಗಿದೆ. ನಂತರ ಇವನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸಲಾಗಿದ್ದು, ಹುಡುಗಿಯರು ಒಪ್ಪದೇ ಇದ್ದಾಗ ವಾಟ್ಸಾಪ್ ನಲ್ಲಿ ಹರಿಯಬಿಡಲಾಗಿದೆ ಎನ್ನಲಾಗಿದೆ.
ಪ್ರತೀಕ್ ಗೌಡನನ್ನು ಶಿವಮೊಗ್ಗ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.