DoubleClickMedia
ಕಾರ್ಕಳ: ಖಾಸಗಿ ಬಸ್-ಸ್ಕೂಟರ್ ಡಿಕ್ಕಿ: 26 ವರ್ಷದ ಯುವಕ ಸಾವು

ಕಾರ್ಕಳ, ಜೂ.9: ತಾಲೂಕಿನ ಬೈಲೂರು ಕೆಳಪೇಟೆಯಲ್ಲಿ ಸ್ಕೂಟರ್‌ಗೆ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತರನ್ನು ಕಾರ್ಕಳ ನಿವಾಸಿ ಕಾರ್ತಿಕ್ (26) ಎಂದು ಗುರುತಿಸಲಾಗಿದೆ. ಅವರು ಬೈಲೂರಿನಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕಾರ್ಕಳದಿಂದ ಉಡುಪಿ ಕಡೆ ತೆರಳುತ್ತಿದ್ದ ಬಸ್ಸು ಮುಖಾಮುಖಿ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಕಾರ್ತಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್ತಿಕ್ ಅವರು ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.