DoubleClickMedia
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ 18 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು, ಆಗಸ್ಟ್ 21: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕು ಎಂಐಎಸ್ ಸಂಯೋಜಕ, ತಾಂತ್ರಿಕ ಸಂಯೋಜಕ, ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ಆಡಳಿತ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 25, 2023 ಕೊನೆಯ ದಿನಾಂಕವಾಗಿದೆ.
ಶೈಕ್ಷಣಿಕ ಅರ್ಹತೆ :
ತಾಲೂಕು ಎಂಐಎಸ್ ಸಂಯೋಜಕ – ಎಂಸಿಎ ಅಥವಾ ಬಿಇ ಇನ್ ಕಂಪ್ಯೂಟರ್/ ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಪದವಿ ಅಥವಾ ತತ್ಸಮಾನ ಪದವಿ.
ತಾಂತ್ರಿಕ ಸಂಯೋಜಕ & ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ/ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್ ಪದವಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ)
ಆಡಳಿತ ಸಹಾಯಕರು – ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.