top of page
  • Writer's pictureDoubleClickMedia

ಭದ್ರಾವತಿ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ, ಸ್ಥಳೀಯರ ಪ್ರತಿಭಟನೆ



ಶಿವಮೊಗ್ಗ, ಆಗಸ್ಟ್‌ 21: ಮಹಾತ್ಮ ಗಾಂಧಿ ಪ್ರತಿಮೆಯನ್ನು ಕೆಡವಿ ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಡೆದಿದೆ.



ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ ಗಾಂಧೀಜಿ ಪ್ರತಿಮೆಯನ್ನು 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿತ್ತು. ಭಾನುವಾರ ತಡರಾತ್ರಿ ಕಿಡಿಗೇಡಿಗಳು ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.



ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


bottom of page