DoubleClickMedia
ನಟ ಉಪೇಂದ್ರ ಗೆ ಬಿಗ್ ರಿಲೀಫ್: ಎಫ್ಐಆರ್‌ಗೆ ಮಧ್ಯಂತರ ಹೈಕೋರ್ಟ್ ತಡೆ

ಸೋಶಿಯಲ್ ಮೀಡಿಯಾದಲ್ಲಿ ಜಾತಿ ನಿಂದನೆ ಪದ ಬಳಿಸಿದ ಆರೋಪವನ್ನು ಸಂಕಷ್ಟಕ್ಕೆ ಸಿಲುಕಿದ್ದ ನಟ ಉಪೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶಿಸಿದೆ.
ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ಹಾಕಲಾಗಿದ್ದ ಎಫ್ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈಗ ಅವರ ಪರವಾಗಿ ಕೋರ್ಟ್ ಆದೇಶ ನೀಡಿದೆ. ‘ಗಾದೆ ಮಾತು ಉಲ್ಲೇಖಿಸಿ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಇದಕ್ಕೆ ಅನ್ವಯವಾಗುವುದಿಲ್ಲ’ ಎಂದು ಉಪೇಂದ್ರ ಪರವಾಗಿ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.