DoubleClickMedia
ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ಬೆಂಗಳೂರು ಜೂನ್ 15, 2023: ಸಾರಿಗೆ ನೌಕರರ ವೇತನವನ್ನು ಶೇ. 15ರಷ್ಟು ಹೆಚ್ಚಳ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್ ತಿಂಗಳಿಂದ ಪೂರ್ವಾನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇ. 15 ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.
ಇನ್ಸೆಟಿವ್ ಹೆಚ್ಚು ಮಾಡುವುದು, ಬಾಟಾವನ್ನ ಹೆಚ್ಚು ಮಾಡುವುದು, ಶೇ. 25 ರಷ್ಟು ವೇತನ ಹೆಚ್ಚಳ ಮಾಡುವುದು, ಜೊತೆಗೆ ವಜಾ ಮಾಡಿದ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವುದು ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಾಗಿತ್ತು. ಈ ಪೈಕಿ ವೇತನ ಹೆಚ್ಚಳಕ್ಕೆ ಮುಂದಾಗಿರುವ ಕಾಂಗ್ರೆಸ್, ಸಚಿವ ಸಂಪುಟ ಸಭೆಯಲ್ಲಿ ಶೇ 15ರಷ್ಟು ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.