top of page
  • Writer's pictureDoubleClickMedia

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು,ಜೂ.29: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಎನ್‍ಎಂಡಿಎಫ್‍ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ಖ ಜನಾಂಗದ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Education loan for foreign studies

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾನಿಲಯದಿಂದ ಹಾಗೂ ಭಾರತದ ದೇಶದ ಪ್ರತಿಷ್ಠಿತ IIT. IIM, ISC ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವವರು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯ ನಿಗಮದ ವೆಬ್‍ಸೈಟ್ http://kmdconline.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಕೆ.ಎಂ.ಡಿ.ಸಿ ವೆಬ್‍ಸೈಟ್ ನಲ್ಲಿ ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಮೂಲ ದಾಖಲಾತಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸದ ಕೂಡಲೇ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾಅಜಾದ್ ಭವನ, 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು-575001 ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ದೂರವಾಣಿ ಸಂಖ್ಯೆ: 0824-2951644 ಅಥವಾ


ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ,

ಕೆಳಗಿನ ಮಹಡಿ, ಭಾರತ್ ಕಮರ್ಶಿಯಲ್ ಕಾಂಪ್ಲೆಕ್ಸ್, ಬಿ.ಸಿ.ರೋಡು ಬಂಟ್ವಾಳ, ದೂ.ಸಂಖ್ಯೆ:08255-232470,


ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ,

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಟ್ಟಡ,

ತಾಲೂಕು ಪಂಚಾಯತ್ ರಸ್ತೆ ಬೆಳ್ತಂಗಡಿ, ದೂ.ಸಂಖ್ಯೆ:08256-295335,


ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ,

ತಾಲೂಕು ಪಂಚಾಯತ್ ಸಾಮಥ್ರ್ಯ ಸೌಧ ಕಟ್ಟಡ,

ಪುತ್ತೂರು ತಾಲೂಕು ದೂ.ಸಂಖ್ಯೆ:08251-237078,


ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ,

ಪಂಚಾಯತ್ ಕಟ್ಟಡ, ಕೆ.ಸಿ ರೋಡ್ ಸುಳ್ಯ ದೂ.ಸಂಖ್ಯೆ: 028257-230666 ಹಾಗೂ

ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


bottom of page