top of page
  • Writer's pictureDoubleClickMedia

ವಿಮಾನ ತುರ್ತು ಭೂಸ್ಪರ್ಶ: ಇಂಡಿಗೋ ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡ ಪ್ರಯಾಣಿಕ


IndiGo


ಮಹಾರಾಷ್ಟ್ರ, ಆಗಸ್ಟ್‌ 22: ಇಂಡಿಗೋ ವಿಮಾನಯಾನ ಸಂಸ್ಥೆಯ ಮುಂಬೈ-ರಾಂಚಿ ವಿಮಾನವು ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತು ಪರಿಸ್ಥಿತಿ ಇಂದಾಗಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಪ್ರಯಾಣಿಕರೊಬ್ಬರು ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದರು, ಕೂಡಲೇ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಡಿಂಗ್ ಮಾಡಿ, ಬಳಿಕ ಅವರನ್ನು​ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೀವ ಉಳಿಸಲು ಸಾಧ್ಯವಾಗಿಲ್ಲ.ಸೋಮವಾರ ಆಗಸ್ಟ್ 21 ರಾತ್ರಿ 8 ಗಂಟೆ ಸುಮಾರಿಗೆ ಇಂಡಿಗೋ ವಿಮಾನದಲ್ಲಿದ್ದ (6E 5093) 62 ವರ್ಷದ ಡಿ ತಿವಾರಿ ಎಂಬ ಪ್ರಯಾಣಿಕ ಕಿಡ್ನಿ ಮತ್ತು ಕ್ಷಯರೋಗದಿಂದ ಬಳಲುತ್ತಿದ್ದು, ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದಾರೆ . ಹೀಗಾಗಿ ಮುಂಬೈನಿಂದ ರಾಂಚಿಗೆ

ತೆರಳುತ್ತಿದ್ದ ವಿಮಾನವು ನಾಗ್ಪುರದ ಬಾಬಾಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕನನ್ನು ಕೂಡಲೇ ಸರ್ಕಾರಿ ವೈದ್ಯಕೀಯ ಕಾಲೇಜು-ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ತಿವಾರಿ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.


Comments


bottom of page