top of page
  • Writer's pictureDoubleClickMedia

ಜನ ಸಾಮಾನ್ಯರಿಗೆ ಗುಡ್‌ ನ್ಯೂಸ್‌: ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ


LPG

ನವದೆಹಲಿ, ಆಗಸ್ಟ್‌ 29: 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.



ಮುಂದಿನ 24 ಗಂಟೆಗಳಲ್ಲಿ, ಅಂದರೆ ಆಗಸ್ಟ್ 30ರಂದು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಪ್ರಟಿಸಬಹುದು ಎಂದು ಮೂಲಗಳು ತಿಳಿಸಿವೆ.



ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.





bottom of page