top of page
  • Writer's pictureDoubleClickMedia

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಬಸ್‌ ಪಾಸ್‌ ಅವಧಿ ವಿಸ್ತರಣೆ


ksrtc bus

ಬೆಂಗಳೂರು ಜೂನ್‌ 15, 2023: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.


ರಾಜ್ಯದ ವಿದ್ಯಾರ್ಥಿಗಳಿಗೆ ಹೊಸ ಬಸ್‌ ಪಾಸ್‌ಗಾಗಿ ಅರ್ಜಿ ಹಾಕಲು ಸೂಚಿರುವ ಕೆಎಸ್‌ಆರ್‌ಟಿಸಿ ಇದೀಗ ಬಸ್‌ ಪಾಸ್‌ನ್ನು ಜೂನ್‌ ೩೦ರವರೆಗೆ ವಿಸ್ತರಿಸಿದೆ. ಈಗಾಗಲೇ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗಬಾರದು ಎಂದು ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದೆ.


ಬಸ್‌ ಪಾಸ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್‌ 12 ರಿಂದ ಪ್ರಾರಂಭಮಾಡಲಾಗಿದೆ. ಆದರಿಂದ ಬಸ್‌ ಪಾಸ್‌ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡಲಾಗಿದೆ. ಎಲ್ಲಾ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳೆದ ಬಾರಿಯ ಪಾಸಿನೊಂದಿಗೆ ಅಥವಾ ಪ್ರಸ್ತುತ ಸಾಲಿನ ಶಾಲಾ-ಕಾಲೇಜುಗಳಿಗೆ ಪಾವತಿಸಿರುವ ರಸೀದಿ ಜೊತೆಗೆ ನಿಗಮದ ಬಸ್ಸುಗಳಲ್ಲಿ ಸಂಚಾರಿಸಲು ಜೂನ್‌ 30 ವರೆಗೆ ಅವಕಾಶ ನೀಡಿರುವುದಾಗಿ ಕೆಎಸ್‌ಆರ್‌ಟಿಸಿ ನಿಗಮದಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


bottom of page