top of page
  • Writer's pictureDoubleClickMedia

ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳು


CMSiddhrammai

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-2024ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಈ ಮೂಲಕ 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿ ಸಿಎಂ ಸಿದ್ದರಾಮಯ್ಯ, ಐತಿಹಾಸಿಕ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ತೆರಿಗೆ ಸೋರಿಕೆ ತಡೆಯುವ ಜೊತೆಯಲ್ಲೇ ಮದ್ಯದ ತೆರಿಗೆ ಏರಿಕೆ ಮಾಡುವ ಮೂಲಕ ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಲಾಗಿದೆ.ಬಜೆಟ್‌ನ ಮುಖ್ಯಾಂಶಗಳು:


* 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು


*ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ


*ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ


*ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ - ಡಿಕೆಶಿ ಖಾತೆಗೆ ಬಂಪರ್!


*ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ


*ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ*ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ


*ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ - 'ಅನುಗ್ರಹ ಯೋಜನೆ' ಮರು ಜಾರಿ


*ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು


*ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ


*ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ


*ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್

'

*ಕೃಷಿ ಭಾಗ್ಯ ಯೋಜನೆ'ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.


*ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ*ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆ ಉನ್ನತೀಕರಣ


*ಕನಕಪುರ ತಾಲ್ಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು


*ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ


*ಕಲಬುರಗಿಯಲ್ಲಿ ತಾಯಿ - ಮಗು ಆಸ್ಪತ್ರೆ ನಿರ್ಮಾಣ - 70 ಕೋಟಿ ರೂ. ವೆಚ್ಚ


*ಹಿಂದಿನ ಸರ್ಕಾರದ ಪಠ್ಯ ಪರಿಷ್ಕರಣೆಗೆ ನಿರ್ಧಾರ: ಪರಿಷ್ಕರಣೆ ಮಾಡಿದ್ದ ಪಠ್ಯ ಕೈಬಿಡಲು ತೀರ್ಮಾನ*ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆ


*1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ


*ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ


*ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿComments


bottom of page