top of page
  • Writer's pictureDoubleClickMedia

ಮಾಜಿ ಸಿಎಂ ಬಿಎಸ್‌ವೈಗೆ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಗೌರವ ಡಾಕ್ಟರೇಟ್‌ಶಿವಮೊಗ್ಗ ಜು. 21 :ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕರಾದ ಬಿಎಸ್‌ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ ಘೋಷಣೆ ಮಾಡಲಾಗಿದೆ.ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಶುಕ್ರವಾರ ನಡೆಯಲಿರುವ ಘಟಿಕೋತ್ಸವದಲ್ಲಿ ಬಿಎಸ್‌ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್‌ ಅನ್ನು ಪ್ರಧಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಜಗದೀಶ್‌ ಮಾಹಿತಿ ನೀಡಿದ್ದಾರೆ.


ವಿಶ್ವವಿದ್ಯಾಲಯದ 8ನೇ ಘಟಿಕೋತ್ಸದಲ್ಲಿ ಕೃಷಿ ,ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ 409 ವಿಧ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. 101ವಿಧ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗು 23 ವಿಧ್ಯಾರ್ಥಿಗಳು ಪಿಎಚ್ ಡಿ ಪದವಿ ಪಡೆಯುತ್ತಿದ್ದಾರೆ. ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 8 ವಿಧ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದು ಒಟ್ಟು 15 ಚಿನ್ನದ ಪದಕ ನೀಡಲಾಗುವುದು. ಒಟ್ಟಾರೆ ಈ ಬಾರಿಯ ಘಟಿಕೋತ್ಸವದಲ್ಲಿ 37 ಚಿನ್ನದ ಪದಕ‌ಗಳನ್ನು ನೀಡಲಾಗುವುದು ಎಂದು ಕುಲಪತಿ ಡಾ. ಜಗದೀಶ್‌ ಹೇಳಿದ್ದಾರೆ.ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಕೃಷಿ ಸಚಿವರ ಎನ್. ಚಲುವರಾಯ ಸ್ವಾಮಿಯವರ ಗೌರವ ಉಪಸ್ಥಿತಿ ಇರಲಿದೆ. ಡಾ.ವೀರೇಂದ್ರ ಹೆಗ್ಗಡೆಯವರು ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.
Комментарии


bottom of page