top of page
  • Writer's pictureDoubleClickMedia

ಕರ್ನಾಟಕ ಮುಕ್ತ ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್‌


President Draupadi Murmu

ಮೈಸೂರು ಜೂ. 30: ಕರ್ನಾಟಕ ರಾಜ್ಯದ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್‌ ನೀಡಲಾಗುವುದು ಎಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ತಿಳಿಸಿದ್ದಾರೆ.ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುತ್ತಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ, ಶ್ರೀ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರೊ.ಶರಣಪ್ಪ ಹಲಸೆ ಹೇಳಿದ್ದಾರೆ.ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅತಿಥಿಗೃಹ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತಃ ಶಿಕ್ಷಕರು ಹಾಗೂ ಆದಿವಾಸಿ ಮಹಿಳೆ ಆಗಿರುವ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವ ಡಾಕ್ಟರೇಟ್ ಪದವಿ ನೀಡಲು ಆಯ್ಕೆ ಮಾಡಲಾಗಿದೆ. ಹಾಗೆಯೇ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎನ್. ರಾಮಚಂದ್ರ, ಆರೋಗ್ಯ ಕ್ಷೇತ್ರದ ಸೇವೆಯನ್ನು ಗುರುತಿಸಿ ವೆಂಕಟಲಕ್ಷ್ಮಿ ನರಸಿಂಹರಾಜು ಸೇರಿ ಒಟ್ಟು ಮೂವರು ಗೌರವ ಡಾಕ್ಟರೇಟ್‌ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.Comments


bottom of page