top of page
  • Writer's pictureDoubleClickMedia

ಅಕ್ರಮ ಆಸ್ತಿ ಪ್ರಕರಣ: ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ಜಾಮೀನು


man portrait


ಬೆಂಗಳೂರು ಆ. 8: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರಂ ತಹಶೀಲ್ದಾರ್​ ಅಜಿತ್​ ಕುಮಾರ್ ರೈಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.


ಜಾಮೀನು ಮಂಜೂರು ಮಾಡುವಂತೆ ಕೋರಿ ಸಿಟಿ ಸಿವಿಲ್​ ಕೋರ್ಟ್​ಗೆ ಅಜಿತ್​ ಕುಮಾರ್​ ರೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಾಧಾಕೃಷ್ಣ ಅವರು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ.ಅಜಿತ್​ ಕುಮಾರ್​ ರೈ ಈ ಹಿಂದೆ ಜಾಮೀನು ಮಂಜೂರು ಮಾಡುವಂತೆ ಕೋರಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೆಲವುಗ ಕಾಲ ನ್ಯಾಯಾಲಯವು ಅಜಿತ್​ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿ ತನಿಖಾ ತಂಡದ ವಶಕ್ಕೆ ನೀಡಿತ್ತು.


ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಕೆ.ಆರ್. ಪುರಂ ತಹಶೀಲ್ದಾರ್​ ಅಜಿತ್​ ಕುಮಾರ್​ ರೈ ಅವರ ಮನೆ ಮೇಲೆ ದಾಳಿ ಮಾಡಿತ್ತು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಜೂನ್​ 29ರಂದು ಅವರನ್ನು ವಶಕ್ಕೆ ಪಡೆಯಲಾಗಿತ್ತು.


Comments


bottom of page