DoubleClickMedia
ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಮಹತ್ವದ ಎಚ್ಚರಿಕೆ: ಅರ್ಧ ಹೆಲ್ಮೆಟ್ ಹಾಕಿದ್ರೆ ಬೀಳತ್ತೆ ದಂಡ

ಶಿವಮೊಗ್ಗ ಜು.25 : ಅರ್ಧ ಹೆಲ್ಮೆಟ್ ಧರಿಸುವ ದ್ವಿಚಕ್ರ ವಾಹನ ಸವಾರರಿಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮಹತ್ವದ ಎಚ್ಚರಿಕೆ ಸಂದೇಶ ನೀಡಿದ್ದಾರೆ. ನಾಳೆಯಿಂದ ದಂಡ ವಿಧಿಸಲಾಗುವುದು.
ಇಂದು ಶಿವಪ್ಪ ನಾಯಕನ ವೃತ್ತದಲ್ಲಿ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ ನೇತೃತ್ವದಲ್ಲಿ ಕಾರ್ಯಾಚಾರಣೆ ನಡೆಸಿ ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರನ್ನು ತಡೆದು ಅಂತಹ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ನೂರಾರು ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದು ಪೊಲೀಸರು ನಾಳೆಯಿಂದ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.