top of page
  • Writer's pictureDoubleClickMedia

ಮಂಗಳೂರು:ಹಿಟ್ ಅಂಡ್ ರನ್ ಪ್ರಕರಣ, ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು


ಮಂಗಳೂರು, ಜೂ.12: ಇನ್ನೋವಾ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಘಟನೆ ಮಂಗಳೂರಿನ ಸಂಕೋಲಿಯಲ್ಲಿರುವ ಪೆಟ್ರೋಲ್ ಬಂಕ್‌ ಬಳಿ ನಡೆದಿದೆ.



ಅಪಘಾತದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಕೋಟೆಕಾರ್ ಪೇಟೆಯ ಮೋದೂರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ


ಜೂನ್ 4 ರಂದು ತಡರಾತ್ರಿ ತೇಜಸ್ ತನ್ನ ಬೈಕ್‌ಗೆ ಪೆಟ್ರೋಲ್ ಹಾಕಿಸಲು ಸಂಕೋಲಿಯಲ್ಲಿರುವ ಪೆಟ್ರೋಲ್ ಬಂಕ್‌ಗೆ ತೆರಳುತ್ತಿದ್ದಾಗ ಕೇರಳ ರಾಜ್ಯ ನೋಂದಣಿ ಸಂಖ್ಯೆಯ ಇನ್ನೋವಾ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.


ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಮರುದಿನ ತಲಪಾಡಿ ಟೋಲ್ ಗೇಟ್ ನಲ್ಲಿ ದಾಖಲಾಗಿದ್ದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ.



bottom of page