top of page
  • Writer's pictureDoubleClickMedia

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ


Mullai Muhilan

ಮಂಗಳೂರು ಜೂ.17, 2023 : ರಾಜ್ಯ ಸರ್ಕಾರ ಶುಕ್ರವಾರ ಹೊರಡಿಸಿದ್ದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂಪಿ ಅವರನ್ನು ನೇಮಕ ಮಾಡಲಾಗಿದ್ದು ಇಂದು ರವಿಕುಮಾರ್ ಎಂ.ಆರ್ ಅಧಿಕಾರವನ್ನು ಅವರಿಗೆ ಹಸ್ತಾಂತರಿಸಿದ್ದಾರೆ.ಈ ಹಿಂದೆ ಮುಲ್ಲೈ ಮುಹಿಲನ್, ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು 2013ರ ಬ್ಯಾಚ್‌ನಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರವಿಕುಮಾರ್ ಎಂಆರ್ ಅವರು ಅಕ್ಟೋಬರ್ 31, 2022ರಂದು ಅಧಿಕಾರ ವಹಿಸಿಕೊಂಡಿದ್ದರು.


ಇದರ ಜೊತೆಗೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಮಾರ್‌ ಅವರನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಡಾ.ಕುಮಾರ್, 2021ರಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸೇವೆಸಲ್ಲಿಸುತ್ತಿದ್ದರು.bottom of page