top of page
  • Writer's pictureDoubleClickMedia

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ


Opposition leaders

ಬೆಂಗಳೂರು ಜು.18: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟ್​​ ಇನ್​ಕ್ಲೂಸಿವ್​​​​ ಅಲೈನ್ಸ್ ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.



ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ್ಗೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಯಕರು ಈ ನಿರ್ಧಾರ ಘೋಷಿಸಿದರು. ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಖರ್ಗೆ ತಿಳಿಸಿದರು.



26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್​​ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.



Comments


bottom of page