DoubleClickMedia
ಕರ್ನಾಟಕ ವಿಧಾನಸಭೆಯಲ್ಲಿ ಅತಿರೇಕದ ವರ್ತನೆ: ಬಿಜೆಪಿಯ 10 ಶಾಸಕರು ಅಮಾನತು

ಬೆಂಗಳೂರು ಜು.19: ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್ ಪ್ರತಿಯನ್ನು ಹರಿದು ಹಾಕಿ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಹತ್ತು ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.
ಮಧ್ಯಾಹ್ನದ ಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ ಸರ್ಕಾರದ ಬಿಲ್ ಪ್ರತಿಯೊಂದನ್ನು ಬಿಜೆಪಿಯ ಹತ್ತು ಮಂದಿ ಶಾಸಕರು ಹರಿದು ಸ್ಪೀಕರ್ ಮೇಲೆ ಎಸೆದಿದ್ದಾರೆ. ಇನ್ನು ವಿಧಾನಸಭಾ ಅಧಿವೇಶನದಲ್ಲಿ ಅಶಿಸ್ತಿನಿಂದ ನಡೆದುಕೊಂಡ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಿ ಶಾಸಕರನ್ನು ಅಧಿವೇಶನದಿಂದ ಹೊರ ಹಾಕಲಾಗಿದೆ.