top of page
  • Writer's pictureDoubleClickMedia

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ

ಮಂಗಳೂರು,ಜೂ.23: ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

pdo caught while taking bribe

ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಈತ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರಿಂದ ಕೌಕ್ರಾಡಿಯ ತಮ್ಮ ಜಮೀನಿನಲ್ಲಿ ಖಾತೆ ಬದಲಾವಣೆಗೆ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟದ್ದ. ಅದರಂತೆ ಜೂ. 22 ರಂದು 20 ಸಾವಿರ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಪಿಡಿಓ ಮಹೇಶ್‍ನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ


ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್ ಮಾರ್ಗದರ್ಶನದಲ್ಲಿ ಉಪಾಧೀಕ್ಷಕರಾದ ಕಲಾವತಿ, ಚೆಲುವರಾಜ್ ಹಾಗೂ ಪೊಲೀಸ್ ನಿರೀಕ್ಷಕ ಅಮನುಲ್ಲಾ, ವಿನಾಯಕ ಬಿಲ್ಲವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.


bottom of page