top of page
  • Writer's pictureDoubleClickMedia

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದ ವಿರುದ್ಧ ರಮ್ಯಾ ತಕರಾರು: ಸೀನ್‌ ಡಿಲೀಟ್‌ ಮಾಡುವಂತೆ ನ್ಯಾಯಾಲಯ ಸೂಚ


Actress Ramya

ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡಕ್ಕೆ ಲೀಗಲ್​ ನೋಟೀಸ್​ ನೀಡಿ ಶಾಕ್‌ ಕೊಟ್ಟಿದ್ದು ಇದೀಗ ರಮ್ಯಾ ಇರುವ ಸೀನ್‌ನ್ನು ಡಿಲೀಟ್‌ ಮಾಡಲು ಚಿತ್ರತಂಡಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಬೆಂಗಳೂರಿನ 83ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರವೀಂದ್ರ ಹೆಗ್ಡೆ ಅವರು ಆದೇಶ ನೀಡಿದ್ದಾರೆ.
’ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್‌ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿ ಸದ್ದು ಮಾಡಿತ್ತು. ರಮ್ಯಾ ಲೆಕ್ಚರರ್‌ ಪಾತ್ರದಲ್ಲಿ ಗಮನ ಸೆಳೆದಿದ್ದರು. ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್​ ಖುಷಿ ಆಗಿದ್ದರು.


ಟ್ರೈಲರ್‌ ನಲ್ಲಿರುವ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್​ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್​ ಮಾಡಿದ್ದರು. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ನೋಟೀಸ್​ನಲ್ಲಿ ಒತ್ತಾಯಿಸಿದ್ದರು.‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಜುಲೈ 21ರಂದು ಬಿಡುಗಡೆ ಮಾಡಲು ಚಿತ್ರತಂಡ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಆದರೆ ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್​ ನೋಟೀಸ್​ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್​ನಲ್ಲಿ ಭಾಗಿ ಆಗಿದ್ದರು.


ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.
Comentários


bottom of page