top of page
  • Writer's pictureDoubleClickMedia

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆಶಿವಮೊಗ್ಗ, ಜು.21: ರೌಡಿಶೀಟರ್ ಒಬ್ಬನನ್ನು ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ನಿನ್ನೆ(ಜು.20) ರಾತ್ರಿ 12.30 ರ ಸುಮಾರಿಗೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.ಹತ್ಯೆಯಾದ ರೌಡಿಶೀಟರ್‌ನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ಏಕಾಏಕಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.


ಭದ್ರಾವತಿಯಲ್ಲಿ ಈ ಹಿಂದೆ ನಡೆದಿದ್ದ ಹಲವು ಅಪರಾಧ ಪ್ರಕರಣದಲ್ಲಿ ಮುಜಾಯಿದ್ದೀನ್ ಭಾಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಘಟನಾ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.Bình luận


bottom of page