DoubleClickMedia
ದ.ಕ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣ ಕಲ್ಪಿಸಿ: ಸುನೀಲ್ ಕುಮಾರ್
ಮಂಗಳೂರು: ಸರಕಾರಿ ಬಸ್‌ಗಳ ಜತೆಗೆ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಕಾರ್ಕಳದ ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಶೀಘ್ರವೇ ಪರಿಚಯಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಭರವಸೆಗೆ ಪ್ರತಿಕ್ರಿಯಿಸಿ ಅವರು ಟ್ವೀಟ್ ಮಾಡಿದ್ದಾರೆ.
ಸುನೀಲ್ ಕುಮಾರ್ ಅವರು ತಮ್ಮ ಟ್ವೀಟ್‌ನಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಸ್‌ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಬಸ್ ಸೇವೆಯನ್ನು ಸೀಮಿತಗೊಳಿಸಲು ಸರ್ಕಾರ ನಿರ್ಧರಿಸಿದ್ದು ಸರ್ಕಾರಿ ಬಸ್‌ಗಳು ಲಭ್ಯವಿಲ್ಲದ ಕಾರಣ ಈ ಪ್ರದೇಶಗಳಲ್ಲಿ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.