DoubleClickMedia
ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ, ಜು 31: ಭ್ರಷ್ಟಚಾರ ಪ್ರಕರಣದ ತನಿಖೆ ವಿಚಾರದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸದ್ಯ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್ ನಿರಾಳರಾಗಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆಗೆ ಡಿಕೆ ಶಿವಕುಮಾರ್ ರಾಜ್ಯ ಹೈಕೋರ್ಟ್‌ನಿಂದ ಮಧ್ಯಂತರ ತಡೆ ತಂದಿದ್ದರು. ಆದೇಶ ವಿಸ್ತರಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಫೆಬ್ರವರಿ 10ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾವಿ, ನ್ಯಾ.ಸಿ.ಟಿ.ರವಿಕುಮಾರ್ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಮಧ್ಯಂತರ ತಡೆಯಾಗಿರುವ ಹಿನ್ನಲೆ ಈ ಹಂತದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿದೆ.