DoubleClickMedia
ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ: 3 ವಿದ್ಯಾರ್ಥಿನಿಯರು ಸಸ್ಪೆಂಡ್
ಉಡುಪಿ, ಜುಲೈ 22: ಉಡುಪಿಯ ಪ್ರತಿಷ್ಟಿತ ನೇತ್ರ ಜ್ಯೋತಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.

ಉಡುಪಿ ನಗರದ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಕೆಲ ಅನ್ಯ ಕೋಮಿನ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇನ್ನು ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ.
ಈ ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆ ನಡೆದಿದೆ. ಬಳಿಕ ಮಧ್ಯೆ ಪ್ರವೇಶ ಮಾಡಿದ ಆಡಳಿತ ಮಂಡಳಿ ಕ್ರಮ ತೆಗೆದುಕೊಂಡಿದೆ. ವಿಡಿಯೋ ಶೂಟ್ ಮಾಡಿದ ಮೂವರು ವಿದ್ಯಾರ್ಥಿನಿಯರ ಅಮಾನತು ಮಾಡಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪ್ರಕರಣ ದಾಖಲಿಸಿಲ್ಲ. ಇದೀಗ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಯಿಂದ ಸೂಕ್ತ ತನಿಖೆ ಮಾಡಲು ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಯವರಿಗೆ ಮನವಿ ಸಲ್ಲಿಸಿದ್ದಾರೆ.