top of page
  • Writer's pictureDoubleClickMedia

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ವಿದ್ಯಾರ್ಥಿನಿಯರಿಗೆ ಜಾಮೀನು


Court

ಉಡುಪಿ, ಜು,28 : ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ದೊರೆತಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.ಉಡುಪಿಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಸಹ ವಿದ್ಯಾರ್ಥಿಗಳ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ವರದಿಯಾದ ಬೆನ್ನಲ್ಲೇ, ಪೊಲೀಸರು ಈ ವಿಷಯದಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮತ್ತು ವಿಡಿಯೋ ಅಳಿಸಿದ ಆರೋಪದ ಮೇಲೆ ಮೂವರು ಹುಡುಗಿಯರು ಮತ್ತು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.ಈ ವಿಡಿಯೋ ಚಿತ್ರೀಕರಣ ಘಟನೆಯು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.Comments


bottom of page