top of page
  • Writer's pictureDoubleClickMedia

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನಬೆಂಗಳೂರು, ಆಗಸ್ಟ್‌ 7: ಸ್ಯಾಂಡಲ್‌ವುಡ್‌ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ವಿಜಯ್‌ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ನಿಧನರಾಗಿದ್ದಾರೆ.


ನಾಳೆ ಬೆಂಗಳೂರಿಗೆ ವಿಜಯ್‌ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ.ನಿವೃತ್ತ ಅಸಿಸ್ಟೆಂಟ್‌ ಪೊಲೀಸ್‌ ಆಫೀಸರ್‌ ಬಿ.ಕೆ ಶಿವರಾಮ್‌ ಅವರ ಪುತ್ರಿ ಸ್ಪಂದನ ಅವರು ವಿಜಯ್‌ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.
Comments


bottom of page